Friday, June 27, 2025
Homeತಾಜಾ ಸುದ್ದಿರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ

ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ

spot_img
- Advertisement -
- Advertisement -

ಖ್ಯಾತ ಕಿರುತೆರೆ ನಟಿಯೊಬ್ಬರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿರುವುದು ವರದಿಯಾಗಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟವರು ಕಿರುತೆರೆ ನಟಿ ಪವಿತ್ರಾ ಜಯರಾಂ(35) ಎಂದು ತಿಳಿದು ಬಂದಿದೆ. ಆಂಧ್ರಪ್ರದೇಶದ ಕರ್ನೂಲು ಸಮೀಪ ನಡೆದ ಕಾರು ಅಪಘಾತದಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಭಾನುವಾರ(ಮೇ.12 ರಂದು) ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಟಿ ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ʼತ್ರಿನಯನಿʼ ಧಾರವಾಹಿಯಲ್ಲಿ ನಟಿಸಿ ಅಪಾರ ಮನೆ ಮಂದಿಯ ಮನಗೆದ್ದಿದ್ದರು.

- Advertisement -
spot_img

Latest News

error: Content is protected !!