ಪುತ್ತೂರು: ಖ್ಯಾತ ಯಕ್ಷಗಾನ ಹಿರಿಯ ಕಲಾವಿದರಾದ ಕುಂಬಳೆ ಶ್ರೀಧರ ರಾವ್ ಅವರ ಹೃದಯಾಘಾತದಿಂದ ಚೇತರಿಸಿಕೊಳ್ಳಲಾಗದೆ, ಜುಲೈ 5ರಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರೀಧರ ರಾವ್ ಅವರು 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿಯಾಗಿದ್ದು, ಅವರಿಗೆ ಬೆಳಿಗ್ಗೆ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕರಿಯಾಗದೆ ಅಲ್ಲಿ ನಿಧನರಾಗಿದ್ದಾರೆ.
ಅವರು ಧರ್ಮಸ್ಥಳ,ಮೇಳ ಸೇರಿದಂತೆ ಕೂಡ್ಲು, ಮೂಲ್ಕಿ, ಇರಾ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದರು ಧರ್ಮಸ್ಥಳ ಮೇಳವೊಂದರಲ್ಲಿಯೇ 50 ವರ್ಷಗಳ ಸೇವೆ ಮಾಡಿದ್ದರು.. ಶ್ರೀಧರ ರಾವ್ ರವರು ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದು, ಪುರುಷ ವೇಷದಲ್ಲಿಯೂ ಸೈ ಅನ್ನಿಸಿಕೊಂಡಿದ್ದರು.
ಮೃತರು ಪತ್ನಿ ಸುಲೋಚನಾ, ಪುತ್ರ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.