Sunday, June 7, 2026
Homeತಾಜಾ ಸುದ್ದಿದೀಪಾವಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಫೋಟೋ ಇರಿಸಿ ಲಕ್ಷ್ಮೀ ಪೂಜೆ ಮಾಡಿದ ಅಭಿಮಾನಿ!

ದೀಪಾವಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಫೋಟೋ ಇರಿಸಿ ಲಕ್ಷ್ಮೀ ಪೂಜೆ ಮಾಡಿದ ಅಭಿಮಾನಿ!

- Advertisement -
- Advertisement -

ಕೊಪ್ಪಳ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಲಕ್ಷ್ಮಿ ಪೂಜೆ ವೇಳೆ ವ್ಯಕ್ತಿಯೊಬ್ಬರು ಮಾಜಿ ಮುಖ್ಯಮಂತ್ರಿಗಳ ಪೋಟೋ ಇಟ್ಟು ಪೂಜೆ ಮಾಡಿದ್ದಾರೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪೋಟೋ ಇರಿಸಿ, 2023ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್ ಡಿಕೆ ಬೆಂಬಲಿಸಿ ಎಂದು ಪೂಜೆ ನಡೆಸಿದ್ದಾರೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ನಿಂಗಪ್ಪ ವಿ. ಜಿಗೇರಿ ಎಂಬ ಅಭಿಮಾನಿ ಈ ರೀತಿಯಾಗಿ ಪೂಜೆ ಸಲ್ಲಿಸಿದ್ದಾರೆ.

ರೈತರ ಬಗ್ಗೆ ಕಾಳಜಿ ಇರುವ ಏಕೈಕ ವ್ಯಕ್ತಿ ಅಂದರೆ ಕುಮಾರಸ್ವಾಮಿ, ಎಲ್ಲಾ ಪಕ್ಷದವರಿಗೆ ಒಂದು ಬಾರಿ ಅವಕಾಶ ಮಾಡಿಕೊಟ್ಟಿದ್ದೀರಿ,
ಈ ಬಾರಿ ಪ್ರಾದೇಶಿಕ ಪಕ್ಷಕ್ಕೆ ಅವಕಾಶ ಮಾಡಿಕೊಡಿ ಎಂದು ಕುಮಾರಸ್ವಾಮಿ ಅಭಿಮಾನಿ ಪೂಜೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!