Saturday, April 27, 2024
Homeತಾಜಾ ಸುದ್ದಿಕಾಂಗ್ರೆಸ್‌ನಿಂದ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್ ಪೊಲೀಸರ ವಶಕ್ಕೆ

ಕಾಂಗ್ರೆಸ್‌ನಿಂದ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಪರಮೇಶ್ವರ್ ಪೊಲೀಸರ ವಶಕ್ಕೆ

spot_img
- Advertisement -
- Advertisement -

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಕೂಡ ಧ್ವನಿ ಎತ್ತಿದೆ. ರೈತರ ಪರವಾಗಿ ಹೋರಾಟಕ್ಕಿಳಿದಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆಗೆ ತೆರಳುತ್ತಿದ್ದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ತನ್ವೀರ್ ಸೇಠ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಕಾಂಗ್ರೆಸ್ ಹಾಗೂ ಕಿಸಾನ್ ಘಟಕದಿಂದ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ರಾಜಭವನ ಮುತ್ತಿಗೆಗೆ ಕರೆ ನೀಡಲಾಗಿತ್ತು. ಮೆಜೆಸ್ಟಿಕ್ ನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟಂತ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ ನಲ್ಲಿ ಸಭೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು.

ಈ ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದಂತ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಪೊಲೀಸರು ಮನವೊಲಿಸೋದಕ್ಕೆ ಮುಂದಾಗಿದ್ದರು. ಆದ್ರೇ ಪೊಲೀಸರ ಮನವೊಲಿಕೆಗೆ ಒಪ್ಪದೇ ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಜಿ ಪರಮೇಶ್ವರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಮಹಾರಾಣಿ ಕಾಲೇಜ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಪಡೆದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಲಾಯಿತು.
ಕಾಂಗ್ರೆಸ್ ಹಮ್ಮಿಕೊಂಡಿರುವ ರಾಜಭವನ ಚಲೋ ರ್ಯಾಲಿಯಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಹೀಗಾಗಿ ಬೆಂಗಳೂರು-ಮೈಸೂರು ಹೆದ್ದಾರಿ, ಆನಂದರಾವ್‌ ವೃತ್ತ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸೇರಿದಂತೆ ಹಲವೆಡೆ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

- Advertisement -
spot_img

Latest News

error: Content is protected !!