Friday, June 5, 2026
Homeಕರಾವಳಿಸಾಲ ಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ

ಸಾಲ ಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಸಾಲ ಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಇಡ್ಕಿದು ಎಂಬಲ್ಲಿ ನಡೆದಿದೆ.ಸಹಕಾರಿ ಸಂಸ್ಥೆಯ ಸಾಲ ಬಾಧೆ ತಾಳಲಾರದೆ ಇಡ್ಕಿದು ಬಂಗೇರಕೋಡಿ ನಿವಾಸಿ ವೀರಪ್ಪ ಗೌಡ (55) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಾಗಿದೆ.

ಇಡ್ಕಿದು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸಾಲವನ್ನು ತೆಗೆದುಕೊಂಡಿದ್ದು, ಸಾಲವನ್ನು ಮರುಪಾವತಿಸುವಂತೆ ಸೊಸೈಟಿಯಿಂದ ನೋಟೀಸ್ ಬಂದಿತ್ತು. ಅಲ್ಲದೇ ಹಲವು ಬಾರಿ ಸೊಸೈಟಿಯ ಮ್ಯಾನೇಜರ್ ಹಾಗೂ ಸಿಬ್ಬಂದಿ ಸಾಲವನ್ನು ಕಟ್ಟದಿದ್ದರೆ ಜಮೀನು ಹರಾಜು ಮಾಡುತ್ತಾರೆ ಎಂದು ಮಾನಸಿಕವಾಗಿ ನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪುತ್ರ ನೀಡಿದ ದೂರಿನ ಪ್ರಕಾರ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!