Monday, April 29, 2024
Homeಕರಾವಳಿಕಾಡಾನೆ ದಾಳಿಯಿಂದ ಕೃಷಿಕ ಸಾವು; ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಕಾಡಾನೆ ದಾಳಿಯಿಂದ ಕೃಷಿಕ ಸಾವು; ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

spot_img
- Advertisement -
- Advertisement -

ಮಡಿಕೇರಿ: ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬೀರುಗ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಮೃತಪಟ್ಟಿರುವವರು ಕೃಷಿಕ ಬೀರುಗ ಗ್ರಾಮದ ಅಯ್ಯಮಾಡ ಮಾದಯ್ಯ(63 ಎಂದು ತಿಳಿದು ಬಂದಿದೆ.

ಮಾದಯ್ಯ ಅವರು ಬೆಳಗ್ಗೆ 6.45ರ ಸುಮಾರಿಗೆ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯ ಮೂಲಕ ತೋಟಕ್ಕೆ ತೆರಳುತ್ತಿದ್ದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳೀಯರ ಆಕ್ರೋಶ: ಘಟನಾ ಸ್ಥಳದಲ್ಲಿ ಸೇರಿದ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹಿರಿಯ ಅಧಿಕಾರಿಗಳು ಬರುವವರೆಗೆ ಮೃತದೇಹವನ್ನು ಸ್ಥಳದಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು. ಅನಂತರ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳ ಎದುರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ತತ್‌ಕ್ಷಣದಿಂದಲೇ ಕಾರ್ಯಾಚರಣೆ ಆರಂಭಿಸಿ ಆನೆಗಳನ್ನು ಕಾಡಿಗೆ ಅಟ್ಟುವಂತೆ ತಾಕೀತು ಮಾಡಿದರು. ಇದಕ್ಕೆ ಅರಣ್ಯ ಅಧಿಕಾರಿಗಳು ಸಮ್ಮತಿ ಸೂಚಿಸಿದರು.

ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ಮಾತನಾಡಿ, ಬೀರುಗ ಹಾಗೂ ಕುರ್ಚಿ ಭಾಗದ ತೋಟಗಳಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ಬೀಡು ಬಿಟ್ಟಿದ್ದು, ಈ ಬಗ್ಗೆ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಕೃಷಿಕರು, ಕಾರ್ಮಿಕರು ಬದುಕುವುದೇ ಕಷ್ಟವಾಗಿದೆ. ವನ್ಯಪ್ರಾಣಿಗಳ ಉಪಟಳದಿಂದ ಈ ಭಾಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

ಪರಿಹಾರ ಹಸ್ತಾಂತರ; ಮಾದಯ್ಯ ಅವರ ಕುಟುಂಬಕ್ಕೆ ಡಿಎಫ್ಒ ಭಾಸ್ಕರ್‌ ಅವರು ಪರಿಹಾರದ ಚೆಕ್‌R ಹತ್ತಾಂತರಿಸಿದರು. ವಿಧಾನ ಪರಿಷತ್‌ ಸದಸ್ಯರಾದ ಸುಜಾ ಕುಶಾಲಪ್ಪ, ಎಸಿಎಫ್ ನೆಹರೂ, ರೈತ ಸಂಘದ ಪ್ರಮುಖರು ಹಾಜರಿದ್ದರು.

- Advertisement -
spot_img

Latest News

error: Content is protected !!