Thursday, May 9, 2024
Homeತಾಜಾ ಸುದ್ದಿಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ಕೃಷಿಕ ಅಮೈ ಮಹಾಲಿಂಗ ನಾಯ್ಕ

ಮುಟ್ಟಾಳೆ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ ಕೃಷಿಕ ಅಮೈ ಮಹಾಲಿಂಗ ನಾಯ್ಕ

spot_img
- Advertisement -
- Advertisement -

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಪಗ್ರತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು ಕೃಷಿ ಭೂಮಿಗೆ ನೀರು ಹರಿಸಿದ್ದು, ಇವರು ರಾಷ್ಟ್ರಪತಿಗಳ ಕೈಯಿಂದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪಡೆದುಕೊಂಡ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆಯೊಂದಿಗೆ ಆಗಮಿಸಿ ಗಮನ ಸೆಳೆದಿದ್ದಾರೆ.


ಮಹಾಲಿಂಗ ನಾಯ್ಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. 27 ವರ್ಷದ ಮಹಾಲಿಂಗ ನಾಯ್ಕ ಅವರು ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಸುರಂಗ ನೀರಿನ ವ್ಯವಸ್ಥೆಯ ಮೊರೆ ಹೋದರು. ಹೀಗೆ ವಿದ್ಯುತ್ ರಹಿತವಾಗಿ ಗುರುತ್ವದ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಪಿಂಕ್ಲರ್ ನೀರಿನ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಮನೆ ಮಾತಾದರು.


6 ಸುರಂಗ ಕೊರೆದರೂ ಮಹಾಲಿಂಗ ನಾಯ್ಕ ಅವರಿಗೆ ನೀರು ಸಿಕ್ಕಿರಲಿಲ್ಲ. ಆದರೂ ತನ್ನ ಪ್ರಯತ್ನ ಬಿಡದ ಅವರು 7 ಸುರಂಗ ಕೊರೆದೇ ಬಿಟ್ಟರು. ಈ ವೇಳೆ ಅವರ ಪ್ರಯತ್ನ ಯಶಸ್ಸು ದೊರಕಿತ್ತು. ಇದೀಗ ಇವರ ಈ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

- Advertisement -
spot_img

Latest News

error: Content is protected !!