Friday, April 26, 2024
Homeಕರಾವಳಿಉಡುಪಿಮನ್ನಾ ಆಗಲಿದೆ ಕೊರೋನಾದಿಂದ ಮೃತಪಟ್ಟ ರೈತರ ಸಾಲ

ಮನ್ನಾ ಆಗಲಿದೆ ಕೊರೋನಾದಿಂದ ಮೃತಪಟ್ಟ ರೈತರ ಸಾಲ

spot_img
- Advertisement -
- Advertisement -

ಮಂಗಳೂರು: ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಹಾಗೂ ಪ್ಯಾಕ್ಸ್ ಗಳಲ್ಲಿ ಸಾಲ ಪಡೆದಿದ್ದ, ಕೊರೋನಾದಿಂದ ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಆಗಲಿದೆ. ಕೋವಿಡ್ ನಿಂದ ಮೃತಪಟ್ಟ ಸಾಲ ಪಡೆದಿರುವ ರೈತರ ಸಾಲ ಮನ್ನಾ ಮಾಡುವ ವಿಚಾರವನ್ನು ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಇಂದು ಮಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಟ್ಟು 451 ಮೃತಪಟ್ಟಿರುವ ರೈತರ ಸಾಲ ಮನ್ನಾ ಆಗಲಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 152 ರೈತರ 2.40 ಕೋಟಿ, ಕೊಡಗು ಜಿಲ್ಲೆಯಲ್ಲಿ 113 ರೈತರ 1.82 ಕೋಟಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ186 ರೈತರ 1.70 ಕೋಟಿ ರೂ. ಮನ್ನಾ ಆಗಲಿದೆ.

ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ಸಭೆ ಸೇರಿ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇವೆ. ಕೋವಿಡ್ ಸಂಕಷ್ಟ ಕಾಲದಲ್ಲಿ ರೈತರ ಸಹಾಯಕ್ಕೆ ಬರಲು ಮುಖ್ಯಮಂತ್ರಿಗಳು ಹಾಗೂ ನಮ್ಮ ಸರ್ಕಾರವು ಸದಾ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರೈತರಿಗೆ ಇನ್ನು ಮುಂದೂ ಸಹ ಸಾಲ ಸೌಲಭ್ಯಗಳು ಸುಲಭವಾಗಿ ಸಿಗುವಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.‌ ಸೋಮಶೇಖರ್ ತಿಳಿಸಿದ್ದಾರೆ. ಬಹುತೇಕ ಜುಲೈ 17 ರಂದು ರಾಜ್ಯ ಸರ್ಕಾರದಿಂದ ಸಾಲ ಮನ್ನಾ ಘೋಷಣೆಯಾಗುವ ನಿರೀಕ್ಷೆಯಿದೆ.

- Advertisement -
spot_img

Latest News

error: Content is protected !!