ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಸಾಗುತ್ತಿರುವುದರ ಮಧ್ಯೆ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮೂಲಕ ಸರ್ಕಾರದ ಗಮನ ಸೆಳೆಯಲು ರೈತರು ಸಜ್ಜಾಗಿದ್ದಾರೆ.
ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಕಾನೂನಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಲಿದ್ದು, ದೆಹಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಜಂತರ್ ಮಂತರ್ ಮುಂದೆ ಷರತ್ತು ಮೇಲೆ ಪ್ರತಿಭಟನೆ ನಡೆಸಲು ರೈತರಿಗೆ ಅನುಮತಿ ನೀಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚದ 200 ಸದಸ್ಯರಿಗೆ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ 6 ಮಂದಿಗೆ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದ್ದು, ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.
ಸಂಸತ್ತಿನ ಕಡೆಗೆ ಮೆರವಣಿಗೆ ಮಾಡದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದ್ದು, ಅನ್ನದಾತರ ಪ್ರತಿಭಟನೆಗೆ ಅನುಮತಿ ನೀಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 11: 30ರ ವೇಳೆಗೆ ರೈತರು ಪ್ರತಿಭಟನಾ ಸ್ಥಳವನ್ನು ತಲುಪುವ ನಿರೀಕ್ಷೆಯಿರುವುದರಿಂದ ಖಾಕಿ ಪಡೆ ಈಗಾಗಲೇ ಬ್ಯಾರಿಕೇಡ್ ನಿರ್ಮಿಸಿ ಭದ್ರತೆ ಕೈಗೊಂಡಿದೆ.
ದೆಹಲಿಯ ಜಂತರ್ ಮಂತರ್ ನಲ್ಲಿ ಇಂದು ರೈತರ ಪ್ರತಿಭಟನೆ;ಪೊಲೀಸರಿಂದ ಬಿಗಿ ಭದ್ರತೆ !!
- Advertisement -
![]()
- Advertisement -
- Advertisement -


