Tuesday, June 30, 2026
Homeಕರಾವಳಿಮಂಗಳೂರು: ಕನ್ನಡ ಖಾಸಗಿ ನ್ಯೂಸ್ ಚಾನೆಲ್‌ನ ದ.ಕ ಜಿಲ್ಲಾ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ..! ಆರೋಪಿ...

ಮಂಗಳೂರು: ಕನ್ನಡ ಖಾಸಗಿ ನ್ಯೂಸ್ ಚಾನೆಲ್‌ನ ದ.ಕ ಜಿಲ್ಲಾ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ..! ಆರೋಪಿ ಅರೆಸ್ಟ್…!

- Advertisement -
- Advertisement -

ಮಂಗಳೂರು: ಕನ್ನಡ ಖಾಸಗಿ ನ್ಯೂಸ್ ಚಾನೆಲ್‌ನ ದ.ಕ ಜಿಲ್ಲಾ ವರದಿಗಾರ ಸುಖ್‌ಪಾಲ್ ಪೊಳಲಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಿನ್ನೆ ಸಂಜೆ ನಡೆದಿದೆ.

ನಿನ್ನೆ ಸಂಜೆ ವೇಳೆ ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್‌ಪಾಲ್ ಪೊಳಲಿ ಅವರ ಮೇಲೆ ಮಾರಾಕಾಯುಧದಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ.

ವೈಯಕ್ತಿಕ ವಿಚಾರದ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಹಲ್ಲೆಗೊಳಗಾದ ಸುಖ್‌ಪಾಲ್ ಪೊಳಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉರ್ವ ಠಾಣೆಯಲ್ಲಿ ಐಪಿಸಿ 307ರ ಪ್ರಕಾರ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ 324, 341 ಐಪಿಸಿ ಅಡಿಯಲ್ಲಿ ಪ್ರತಿ ದೂರು ದಾಖಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ರನ್ನು ಇಂದು ಭೇಟಿ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!