Wednesday, June 3, 2026
Homeಕರಾವಳಿಉಡುಪಿಶಿರ್ವ: ಬೈಕ್‌ ಡಿಕ್ಕಿ: ತಂದೆ ಮೃತ್ಯು, ಮಗನ ಸ್ಥಿತಿ ಗಂಭೀರ

ಶಿರ್ವ: ಬೈಕ್‌ ಡಿಕ್ಕಿ: ತಂದೆ ಮೃತ್ಯು, ಮಗನ ಸ್ಥಿತಿ ಗಂಭೀರ

- Advertisement -
- Advertisement -

ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್ ಢಿಕ್ಕಿ ಹೊಡೆದು ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಶಿರ್ವದ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್ ಬಳಿ ನಿನ್ನೆ ರಾತ್ರಿ ನಡೆದಿದೆ.

ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಮೃತಪಟ್ಟವರು. ಶ್ರವಣ ಕುಮಾರ(6) ಅಪಘಾತದಲ್ಲಿ ಗಾಯಗೊಂಡವರು. ಡಿಕ್ಕಿ ಹೊಡೆದ ಬೈಕ್ ಸವಾರ ಬೈಕ್ ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!