Saturday, June 6, 2026
Homeತಾಜಾ ಸುದ್ದಿಮಗಳಿಗೆ ಪರ ಪುರುಷನೊಂದಿಗೆ ಅಕ್ರಮ ಸಂಬಂಧ: ಪುತ್ರಿಯ ತಲೆ ಕಡಿದು ಪೊಲೀಸ್ ಠಾಣೆಗೆ ತಂದ ಅಪ್ಪ

ಮಗಳಿಗೆ ಪರ ಪುರುಷನೊಂದಿಗೆ ಅಕ್ರಮ ಸಂಬಂಧ: ಪುತ್ರಿಯ ತಲೆ ಕಡಿದು ಪೊಲೀಸ್ ಠಾಣೆಗೆ ತಂದ ಅಪ್ಪ

- Advertisement -
- Advertisement -

ಲಖನೌ: ತಂದೆಯೊಬ್ಬರು ತನ್ನ 17 ವರ್ಷದ ಮಗಳ ತಲೆ ಕತ್ತರಿಸಿ, ತಲೆಯನ್ನು ಹಿಡಿದು ಪೊಲೀಸ್‌ ಠಾಣೆಗೆ ತಂದ ಘಟನೆ ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯ ಗ್ರಾಮದಲ್ಲಿ ನಡೆದಿದೆ.

ಲಖನೌದಿಂದ 200 ಕಿ.ಮೀ ದೂರದಲ್ಲಿರುವ ಪಾಂಡೇತರ ಗ್ರಾಮದಲ್ಲಿ ಸರ್ವೇಶ್‌ ಕುಮಾರ್‌ ಅವರು ಮಗಳ ರುಂಡ ಕಡಿದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಂಡು ಸ್ಥಳೀಯ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಮಗಳು ಪರ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಹಾಗಾಗಿ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆಯ ರುಂಡ ಬೇರ್ಪಡಿಸಿ ಹತ್ಯೆ ಮಾಡಿದ್ದೇನೆ. ದೇಹ ಮನೆಯಲ್ಲಿ ಬಿದ್ದಿದೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!