Monday, June 8, 2026
Homeಕರಾವಳಿಉಡುಪಿಉಡುಪಿ: ಅಪ್ಪ, ಅಮ್ಮ ಹಾಗೂ ಮಗ ಆತ್ಮಹತ್ಯೆಗೆ ಯತ್ನ; ತಂದೆ, ಮಗ ಸಾವು, ತಾಯಿ ಸ್ಥಿತಿ...

ಉಡುಪಿ: ಅಪ್ಪ, ಅಮ್ಮ ಹಾಗೂ ಮಗ ಆತ್ಮಹತ್ಯೆಗೆ ಯತ್ನ; ತಂದೆ, ಮಗ ಸಾವು, ತಾಯಿ ಸ್ಥಿತಿ ಗಂಭೀರ

- Advertisement -
- Advertisement -

ಉಡುಪಿ: ಪತಿ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡದ್ದನ್ನು ನೋಡಿ ಪತ್ನಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ. ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪ್ರಸಾದ್ ದೇವಾಡಿಗ(22) ಮೃತರು. ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದಾರೆ. ಈ ವೇಳೆ ಅವರ ಕೂಗು ಕೇಳಿ ಸ್ಥಳೀಯರು ಆಗಮಿಸಿ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ

ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗಾಗಿ ಅಂಜಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!