Friday, June 5, 2026
Homeಕರಾವಳಿಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ: 21 ಮಂದಿ ಶಂಕಿತರನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ

ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ: 21 ಮಂದಿ ಶಂಕಿತರನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ

- Advertisement -
- Advertisement -

ಮಂಗಳೂರು:  ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಯಾರನ್ನು ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ 21 ಶಂಕಿತರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇವರಲ್ಲಿ ಆರು ಜನರನ್ನು ಬಂಧಿಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಹತ್ಯೆಯಲ್ಲಿ ಆರು ಜನರ ಪಾತ್ರ ಇರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಈ ಆರು ಮಂದಿಯನ್ನು ಬಂಧಿಸಲು ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ಇಂದು ಪೊಲೀಸರು ಮಾಹಿತಿ ನೀಡಲಿದ್ದಾರೆ.

- Advertisement -

Latest News

error: Content is protected !!