Friday, June 5, 2026
Homeತಾಜಾ ಸುದ್ದಿಫಾಝಿಲ್ ಹತ್ಯೆ ಪ್ರಕರಣ: ಆರೋಪಿ ಹರ್ಷಿತ್‌ಗೆ ಜಾಮೀನು

ಫಾಝಿಲ್ ಹತ್ಯೆ ಪ್ರಕರಣ: ಆರೋಪಿ ಹರ್ಷಿತ್‌ಗೆ ಜಾಮೀನು

- Advertisement -
- Advertisement -

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಆರೋಪಿ ಬಂಟ್ವಾಳದ ಹರ್ಷಿತ್‌ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.

ಜು.28 ರಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಫಾಝಿಲ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. ಆ ಪೈಕಿ ಹರ್ಷಿತ್‌ಗೆ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿದ್ದು, ಸೆ.13ರಂದು ಜೈಲಿನಿಂದ ಬಿಡುಗಡೆಗೊಂಡಿದ್ದಾನೆ ಎಂದು ತಿಳಿದು ಬಂದಿದೆ.ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿತರನ್ನು ಕೃತ್ಯ ನಡೆದ ನಂತರ ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅವರಿಗೆ ಉಳಿದುಕೊಳ್ಳಲು ಆಶ್ರಯ ನೀಡಿದ ಆರೋಪಿತನಾದ ಹರ್ಷಿತ್( 28  ವರ್ಷ) ವಾಸ: ಬಂಟ್ವಾಳ ಈತನನ್ನು  ದಿನಾಂಕ 17/08/22 ರಂದು  ವಶಕ್ಕೆ ಪಡೆದುಕೊಂಡು ದಸ್ತಗಿರಿ ಮಾಡಲಾಗಿದೆ. ಕೊಲೆ ಆರೋಪಿತರು ತಪ್ಪಿಸಿಕೊಳ್ಳಲು ನೀಡಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!