Wednesday, May 1, 2024
Homeಕರಾವಳಿಉಡುಪಿನೀಫಾ ವೈರಸ್ ಭೀತಿ: ಕೇರಳಕ್ಕೆ ಅಕ್ಟೋಬರ್ ಅಂತ್ಯದವರೆಗೆ ತೆರಳದಂತೆ ಸಾರ್ವಜನಿಕರಿಗೆ ರಾಜ್ಯ ಸರ್ಕಾರದ ಸಲಹೆ!

ನೀಫಾ ವೈರಸ್ ಭೀತಿ: ಕೇರಳಕ್ಕೆ ಅಕ್ಟೋಬರ್ ಅಂತ್ಯದವರೆಗೆ ತೆರಳದಂತೆ ಸಾರ್ವಜನಿಕರಿಗೆ ರಾಜ್ಯ ಸರ್ಕಾರದ ಸಲಹೆ!

spot_img
- Advertisement -
- Advertisement -

ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡುವಂತೆ ರಾಜ್ಯ ಸರಕಾರ ಸಲಹೆ ನೀಡಿದೆ.

ಕೇರಳದಿಂದ ಆಗಮಿಸುವ ಮತ್ತು ಅಲ್ಲಿಗೆ ತೆರಳುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಲಿದೆ. ತುರ್ತು ಕಾರಣ ಇಲ್ಲದೆ, ಇಲ್ಲಿಂದ ಅಲ್ಲಿಗೆ ತೆರಳಬಾರದು ಮತ್ತು ಕೇರಳಾದಿಂದ ರಾಜ್ಯಕ್ಕೆ ಆಗಮಿಸಬಾರದು ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ನಿಯೋಜಿಸಲಾಗುತ್ತಿದೆ.ಈ ಕುರಿತು ಮಾರ್ಗಸೂಚಿ ಬಿಡುಗಡೆಗೊಳಿಸಿರುವ ರಾಜ್ಯ ಆರೋಗ್ಯ ಇಲಾಖೆ, ಕೇರಳದಿಂದ ಅಗಮಿಸುವವರನ್ನು ತಪಾಸಣೆಗೊಳಪಡಿಸಿ ಜ್ವರ, ಮಾನಸಿಕ ಸ್ಥಿತಿಗತಿ, ದುರ್ಬಲತೆ, ತಲೆನೋವು, ಶ್ವಾಸಕೋಶದ ತೊಂದರೆ, ಕೆಮ್ಮು, ವಾಂತಿ, ಸ್ನಾಯುಸೆಳೆತದಂತಹ ಲಕ್ಷಣಗಳಿವೆಯೇ ಎಂದು ಪರಿಶೀಲಿಸಬೇಕು ಎಂದು ಸೂಚಿಸಿದೆ.

ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಅವರ ಮಾದರಿಗಳನ್ನು ಪಡೆದು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಇಲಾಖೆ ತಿಳಿಸಿದೆ.

- Advertisement -
spot_img

Latest News

error: Content is protected !!