Wednesday, October 5, 2022
HomeUncategorizedಕಾಮನ್ ವೆಲ್ತ್ ಕಂಚಿನ ಪದಕ ವಿಜೇತ ಗುರುರಾಜ್ ಪೂಜಾರಿಗೆ ರಾಜ್ಯ ಸರ್ಕಾರದಿಂದ ಸನ್ಮಾನ

ಕಾಮನ್ ವೆಲ್ತ್ ಕಂಚಿನ ಪದಕ ವಿಜೇತ ಗುರುರಾಜ್ ಪೂಜಾರಿಗೆ ರಾಜ್ಯ ಸರ್ಕಾರದಿಂದ ಸನ್ಮಾನ

- Advertisement -
- Advertisement -

ಬೆಂಗಳೂರು: ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ನಲ್ಲಿ ಕಂಚಿನ ಪದಕ ಗೆದ್ದಿರುವ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಇಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಸನ್ಮಾನಿಸಿದೆ.

ವಿಧಾನಸೌಧದಲ್ಲಿ ಇಂದು ನಡೆದ ಸನ್ಮಾನ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ 15 ಲಕ್ಷ ರೂಪಾಯಿ ನಗದು ಬಹುಮಾನದೊಂದಿಗೆ ಗೌರವಿಸಿದರು. ‌

ಸನ್ಮಾನ ಸ್ವೀಕರಿಸಿ ಮಾತನಾಡಿದ ಗುರುರಾಜ ಪೂಜಾರಿ ಬೇರೆ ರಾಜ್ಯಗಳಂತೆ ಕರ್ನಾಟಕದಲ್ಲೂ ಕ್ರೀಡಾಪಟುಗಳಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ಧನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಇದಲ್ಲದೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದಿರುವ ಬ್ಯಾಡ್ಮಿಂಟನ್ ಪಟು ಅಶ್ವಿನಿ ಪೊನ್ನಪ್ಪ, ಮಹಿಳಾ ಕ್ರಿಕೆಟ್ ಆಟಗಾರ್ತಿ ರಾಜೇಶ್ವರಿ ಗಾಯಕ್ ವಾಡ್ ಅವರನ್ನೂ ಸನ್ಮಾನಿಸಲಾಯಿತು.

- Advertisement -
spot_img
spot_img
- Advertisment -

Latest News

error: Content is protected !!