Tuesday, June 6, 2023
Homeಕರಾವಳಿವಿಟ್ಲ: ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

ವಿಟ್ಲ: ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ವಿಟ್ಲ: ತೆಂಗಿನಮರದಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ  ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.ಪೆರ್ಲ ಎಣ್ಮಕಜೆ ಗ್ರಾಮ ನಲ್ಕ ರೆಂಜಮೂಲೆ ನಿವಾಸಿ ಪ್ರಕಾಶ್ ನಾಯ್ಕ ಕೆ.(54) ಮೃತ ದುರ್ದೈವಿ.

ಪ್ರಕಾಶ್ ಮರಕ್ಕಿಣಿಯಲ್ಲಿ ಮನೆಯೊಂದರ ಪಕ್ಕದಲ್ಲಿರುವ ತೆಂಗಿನಮರ ಏರಿ ಕಾಯಿ ತೆಗೆಯುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ನೆಲಕ್ಕೆ ಬಿದ್ದು  ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!