Tuesday, April 23, 2024
Homeಕರಾವಳಿಬಂಟ್ವಾಳ : ಆಟವಾಡುತ್ತಿದ್ದಾಗ ಮೂರನೇ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ : ಆಟವಾಡುತ್ತಿದ್ದಾಗ ಮೂರನೇ ಮಹಡಿಯಿಂದ ಬಿದ್ದು ಬಾಲಕ ಸಾವು

spot_img
- Advertisement -
- Advertisement -

ಬಂಟ್ವಾಳ: ಆಟವಾಡುತ್ತಿದ್ದ ವೇಳೆ ಮೂರನೇ ಮಹಡಿಯಿಂದ ಆಕಸ್ಮಿಕವಾಗಿ  ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟ ಘಟನೆ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿದೆ.

ಕಲ್ಲಡ್ಕ ಗೋಳ್ತಮಜಲು ನಿವಾಸಿ ಅಹ್ಮದ್ ಎಂಬವರ ಪುತ್ರ ಮುಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ.

ಗೋಲ್ತಮಜಲು ಸಿಟಿ ಪ್ಲಾಝಾ ಫ್ಲ್ಯಾಟ್ ನಲ್ಲಿ ಈ ಘಟನೆ ನಡೆದಿದೆ. ಗೆಳೆಯರ ಜೊತೆ ಆಟವಾಡುತ್ತಿದ್ದ ಸಾಹಿಲ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ.

 ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!