Friday, June 5, 2026
Homeಕರಾವಳಿಸುಬ್ರಹ್ಮಣ್ಯ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು

ಸುಬ್ರಹ್ಮಣ್ಯ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು

- Advertisement -
- Advertisement -

ಸುಬ್ರಹ್ಮಣ್ಯ:ಹೊಳೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಯೇನೆಕಲ್ಲಿನ ಮುಖ್ಯ ರಸ್ತೆಯ ಸೇತುವೆಯ ಕೆಳಭಾಗದಲ್ಲಿ  ನಿನ್ನೆ ರಾತ್ರಿ ನಡೆದಿದೆ.

ಮೃತರನ್ನು ಧರ್ಮಪಾಲ ಪರಮಲೆ (46) ಮತ್ತು ಬೆಳ್ಯಪ್ಪ ಚಳ್ಳಂಗಾರು, ಚೊಕ್ಕಾಡಿ (49) ಎಂದು ಗುರುತಿಸಲಾಗಿದೆ.

ಧರ್ಮಪಾಲರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕಸವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೊಳೆಯಲ್ಲಿದ್ದ ಪಂಪಿನ ಫೂಟ್ ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿನಲ್ಲಿ‌ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರ ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!