Saturday, June 6, 2026
Homeಕರಾವಳಿಉಡುಪಿಉಡುಪಿ; ಮನೆಯಂಗಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಉಡುಪಿ; ಮನೆಯಂಗಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಉಡುಪಿ: ಮನೆಯಂಗಳದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ರಮೇಶ್ ಮೃತ ದುರ್ದೈವಿ.

ರಮೇಶ್ ಮನೆಯಂಗಳದಲ್ಲಿ ತೆಂಗಿನಕಾಯಿ ಹೆಕ್ಕಲು ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ.ಈ ವೇಳೆ ಅವರ ತಲೆಗೆ ಗಂಭೀರ ಗಾಯವಾಗಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!