Thursday, June 4, 2026
Homeಉತ್ತರ ಕನ್ನಡಕಾರವಾರ  ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಫೈಟ್; ಓರ್ವನ ಸ್ಥಿತಿ ಗಂಭೀರ

ಕಾರವಾರ  ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಫೈಟ್; ಓರ್ವನ ಸ್ಥಿತಿ ಗಂಭೀರ

- Advertisement -
- Advertisement -

ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಗಲಾಟೆ ನಡೆದಿದೆ. ನಾಲ್ವರು ಕೈದಿಗಳ ಮಧ್ಯೆ ಹೊಡೆದಾಟ ನಡೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ನಾಲ್ವರು ಕೈದಿಗಳ ನಡುವಿನ ಗಲಾಟೆಯಲ್ಲಿ ಓರ್ವ ಕೈದಿಯ ತಲೆಗೆ ಗಂಭೀರ ಗಾಯವಾಗಿದ್ದು, ರಕ್ತಸ್ತ್ರಾವ ಉಂಟಾಗಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ವಿಷಯ ತಿಳಿದು ಕಾರವಾರ ಜಿಲ್ಲಾ ಕಾರಾಗೃಹಕ್ಕೆ ಎಎಸ್ ಪಿ ಜಯಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೈದಿಗಳ ನಡುವೆ ಗಲಾಟೆ ಯಾವ ಕಾರಣಕ್ಕೆ ಆಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

- Advertisement -

Latest News

error: Content is protected !!