Friday, June 5, 2026
Homeಕರಾವಳಿಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿಗೆಯಿಂದ ಹಲ್ಲೆ

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿಗೆಯಿಂದ ಹಲ್ಲೆ

- Advertisement -
- Advertisement -

ಬಂಟ್ವಾಳ;  ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ  ಮೇಲೆ  ಕಾಂಗ್ರೆಸ್‌ ಕಾರ್ಯಕರ್ತರು ಕಟ್ಟಿಗೆಯಲ್ಲಿ ಹಲ್ಲೆ ನಡೆಸಿದ‌ ಘಟನೆ ಮಾಣಿಯಲ್ಲಿ ನಡೆದಿದೆ. 

ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಣಿ ಜಂಕ್ಸನ್ ನಲ್ಲಿ ಆಕ್ಟೀವಾ  ವಾಹನದಲ್ಲಿ ಹೋಗುತ್ತಿದ್ದ ವೇಳೆ ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿದ ತಂಡ ಕಟ್ಟಿಗೆಯಿಂದ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದೆ  ವಿಟ್ಲ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಲ್ಲದೆ, ಇವರೆಲ್ಲರೂ ಮಾಣಿ ನಾಗು ಸಹಚರರು ಎಂದು ಕೂಡ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಗಾಯಗೊಂಡ ಯುವಕರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾಣಿಯಲ್ಲಿ ನಡೆದ ಪ್ರಕರಣದಲ್ಲಿ ತಲವಾರಿನಿಂದ ಹಲ್ಲೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ದಯವಿಟ್ಟು ಅದನ್ನು ಸರಿಪಡಿಸಿ, ಕಟ್ಟಿಗೆಯಿಂದ ಹಲ್ಲೆ ಆಗಿರುವ ಬಗ್ಗೆ ಸ್ಪಷ್ಟೀಕರಣ ನೀಡುತ್ತಿದ್ದೇವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

- Advertisement -

Latest News

error: Content is protected !!