Sunday, June 28, 2026
Homeಕರಾವಳಿಮಂಗಳೂರು; ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ...

ಮಂಗಳೂರು; ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ

- Advertisement -
- Advertisement -

ಮಂಗಳೂರು; ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸವಾಗಿರುವ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ.

ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಜಗಳ  ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಗಲಾಟೆಯಲ್ಲಿ  ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸವಾಗಿದೆ.ಅದಲ್ಲದೆ ಇಬ್ಬರು ಮಹಿಳೆಯರಿಗೆ ಗಾಯವಾಗಿದೆ ಎನ್ನಲಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. 

- Advertisement -

Latest News

error: Content is protected !!