Thursday, September 10, 2026
Homeಕರಾವಳಿಬೆಳ್ತಂಗಡಿ : ಹೊಸ ವರ್ಷದ ಪಾರ್ಟಿಯಲ್ಲಿ ಯುವಕರಿಬ್ಬರ ನಡುವೆ ಗಲಾಟೆ; ಯುವಕನ ಮೂಗನ್ನು ಕಚ್ಚಿ ತುಂಡರಿಸಿದ...

ಬೆಳ್ತಂಗಡಿ : ಹೊಸ ವರ್ಷದ ಪಾರ್ಟಿಯಲ್ಲಿ ಯುವಕರಿಬ್ಬರ ನಡುವೆ ಗಲಾಟೆ; ಯುವಕನ ಮೂಗನ್ನು ಕಚ್ಚಿ ತುಂಡರಿಸಿದ ಸ್ನೇಹಿತ

- Advertisement -
- Advertisement -

ಬೆಳ್ತಂಗಡಿ : ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ‌.

ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಎಂಬ ಯುವಕ ಯುವಕ ಮೂಗು ತುಂಡರಿಸಿಕೊಂಡ ಯುವಕನಾಗಿದ್ದಾನೆ.ಮೂಗು ತುಂಡರಿಸಿದ ಆರೋಪಿ ಯುವಕ ರಾಕೇಶ್ ಎಂಬಾತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು , ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು , ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಡಿಸೆಂಬರ್ 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ.

ಘಟನೆಯಿಂದ ಗಂಭೀರ ಗಾಯಗೊಂಡ ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಪ್ರಕರಣ ಸಂಬಂಧ ವೇಣೂರು ಪೋಲಿಸರಿಗೆ ದೂರು ನೀಡಲಾಗಿದ್ದು , ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!