Sunday, May 5, 2024
Homeಕರಾವಳಿಬಂಟ್ವಾಳ: KSRTC ಬಸ್ ನಲ್ಲಿ ತೆಂಗಿನೆಣ್ಣೆ ಸಾಗಾಟ: ಮಹಿಳೆ ಹಾಗೂ ಬಸ್ ಕಂಡೆಕ್ಟರ್ ಮಧ್ಯೆ ವಾಗ್ವಾದ

ಬಂಟ್ವಾಳ: KSRTC ಬಸ್ ನಲ್ಲಿ ತೆಂಗಿನೆಣ್ಣೆ ಸಾಗಾಟ: ಮಹಿಳೆ ಹಾಗೂ ಬಸ್ ಕಂಡೆಕ್ಟರ್ ಮಧ್ಯೆ ವಾಗ್ವಾದ

spot_img
- Advertisement -
- Advertisement -

ಬಂಟ್ವಾಳ: KSRTC ಬಸ್ ನಲ್ಲಿ ತೆಂಗಿನೆಣ್ಣೆ ಸಾಗಾಟ ಮಾಡುತ್ತಿದ್ದಕ್ಕೆ ನಿರ್ವಾಹಕ ವಿರೋಧ ವ್ಯಕ್ತಪಡಿಸಿದಕ್ಕೆ ಮಹಿಳೆ ಹಾಗೂ ಬಸ್ ಕಂಡೆಕ್ಟರ್ ಗಳ ಮಧ್ಯೆ ವಾಗ್ವಾದ ನಡೆದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ಭಾನುವಾರ ಮಂಗಳೂರಿನಿಂದ ಹಾಸನಕ್ಕೆ ತೆರಳುವ ಬಸ್ಸಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ತೆಂಗಿನೆಣ್ಣೆ ತುಂಬಿದ ಕ್ಯಾನ್‌ಗಳ ಜತೆ ಪ್ರಯಾಣಿಸುತ್ತಿದ್ದರು. ಇದಕ್ಕೆ  ನಿರ್ವಾಹಕ ಆಕ್ಷೇಪ ವ್ಯಕ್ತಪಡಿಸಿ ಬಸ್ ನಿಂದ ಇಳಿಸಿ  ವಾಗ್ವಾದ ನಡೆಸಿದ್ದು, ಬಳಿಕ ಪೊಲೀಸರ ಮಾತುಕತೆಯಿಂದ ಮಹಿಳೆ ಅದೇ ಬಸ್ಸಿನಲ್ಲಿ ಪ್ರಯಾಣಿಸಿದರು.

ಭಾನುವಾರ ಹಾಸನಕ್ಕೆ ತೆರಳುವ ಬಸ್ಸಿಗೆ ಮಂಗಳೂರಿನಲ್ಲಿ ಚೀಲವೊಂದನ್ನು ಹಿಡಿದು ಮಹಿಳೆ ಹತ್ತಿದ್ದರು. ನಿರ್ವಾಹಕ ಟಿಕೆಟ್‌ ನೀಡುವ ವೇಳೆ ಚೀಲದಲ್ಲೇನು ಎಂದು ಪ್ರಶ್ನಿಸಿದಾಗ ಮಹಿಳೆ ವ್ಯಂಗ್ಯವಾಗಿ ಬಾಂಬ್‌ ಎಂದು ಉತ್ತರಿಸಿದ್ದಾರೆ.

ನಿರ್ವಾಹಕ ಚೀಲವನ್ನು ಪರಿಶೀಲಿಸಿದಾಗ ಮೂರು ಕ್ಯಾನ್‌ ತೆಂಗಿನೆಣ್ಣೆ ಕಂಡುಬಂದಿದೆ. ಈ ವೇಳೆ ಯಾವುದೇ ರೀತಿಯ ಎಣ್ಣೆಯನ್ನು ಬಸ್ಸಿನಲ್ಲಿ ಸಾಗಿಸುವಂತಿಲ್ಲ ಎಂದು ತಗಾದೆ ತೆಗೆದಿದ್ದು, ಈ ವೇಳೆ ನಿರ್ವಾಹಕ-ಮಹಿಳೆಗೆ ಬಿ.ಸಿ.ರೋಡಿನವರೆಗೂ ವಾಗ್ವಾದ ನಡೆದಿದೆ.ಬಿ.ಸಿ.ರೋಡು ನಿಲ್ದಾಣದಲ್ಲಿ ಮಹಿಳೆ ಟ್ರಾಫಿಕ್‌ ಪೊಲೀಸ್‌ ಸಿಬ್ಬಂದಿ ಬಳಿ ಘಟನೆಯನ್ನು ವಿವರಿಸಿದ ಬಳಕ ಅವರು ಈ ವಿಚಾರವನ್ನು ನಗರ ಠಾಣಾ ಪಿಎಸ್‌ಐ ಗಮನಕ್ಕೆ ತಂದರು. ನಾವು ಸಂಸ್ಥೆಯ ನಿಯಮ ಪಾಲಿಸುತ್ತಿದ್ದು, ನಿಯಮ ದ ಪ್ರಕಾರ ಎಣ್ಣೆ ಸಾಗಿಸುವಂತಿಲ್ಲ, ಜತೆಗೆ ಮಹಿಳೆ ಕೇಳಿದಾಗ ಬಾಂಬ್‌ ಎಂಬ ಉತ್ತರ ನೀಡಿದ್ದಾರೆ ಎಂದು ನಿರ್ವಾಹಕ ವಿವರಿಸಿದ್ದಾರೆ.

ನಿರ್ವಾಹಕ ಎಣ್ಣೆ ಎಂದು ಗೊತ್ತಿದ್ದರೂ, ಮತ್ತೆ ಅದನ್ನು ಏನು ಎಂದು ಪ್ರಶ್ನಿಸಿರುವುದಕ್ಕೆ ಬಾಂಬ್‌ ಎಂಬ ಉತ್ತರ ನೀಡಿದ್ದೇನೆ ಎಂದು ಮಹಿಳೆ ಸ್ಪಷ್ಟನೆ ನೀಡಿದರು. ಬಳಿಕ ಪಿಎಸ್‌ಐಯವರು ನಿರ್ವಾಹಕರ ಮನವೊಲಿಸಿ ಮಹಿಳೆಯು ಅದೇ ಬಸ್ಸಿನಲ್ಲಿ ಕಳುಹಿಸಿದ್ದಾರೆ.

- Advertisement -
spot_img

Latest News

error: Content is protected !!