Wednesday, June 3, 2026
Homeಕರಾವಳಿಮಂಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಹೊಡೆದಾಟ ಪ್ರಕರಣ: ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದ...

ಮಂಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಹೊಡೆದಾಟ ಪ್ರಕರಣ: ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದ ಕಮಿಷನರ್

- Advertisement -
- Advertisement -

ಮಂಗಳೂರು: ನಗರದ ಸಂಚಾರ ಪೊಲೀಸ್ ಠಾಣೆಯೊಂದರಲ್ಲಿ ನಿನ್ನೆ ಹಿರಿಯ ಮತ್ತು ಕಿರಿಯ ಪೊಲೀಸ್ ಸಿಬ್ಬಂದಿ ಮಧ್ಯೆ ಹೊಡೆದಾಟ ನಡೆದಿದೆ. ಗಾಯಾಳು ಹಿರಿಯ ಸಿಬ್ಬಂದಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿರುವುದಾಗಿ ಮಾಹಿತಿ ಲಭಿಸಿದೆ.

ಈ ಕುರಿತು ಅಧೀನ ಅಧಿಕಾರಿಗಳ ವರದಿ ಪಡೆದು ಸೂಕ್ತ ವಿಚಾರಣೆಯ ಬಳಿಕ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸೋಮವಾರ ಬೆಳಗ್ಗಿನ ಗಸ್ತು ಕರ್ತವ್ಯಕ್ಕೆ ಸಂಬಂಧಿಸಿ ಠಾಣೆಗೆ ಆಗಮಿಸಿದ ಕಿರಿಯ ಸಿಬ್ಬಂದಿ, ಹಿರಿಯ ಸಿಬ್ಬಂದಿಯ ಮೇಲೆ ರೇಗಾಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಅಲ್ಲಿದ್ದ ಇತರ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆಯೂ ಕಿರಿಯ ಸಿಬ್ಬಂದಿಯ ಮೇಲೆ ಅನುಚಿತ ವರ್ತನೆಯ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿರುವುದರಿಂದ ಇಂತಹ ಘಟನೆ ಮರುಕಳಿಸಿದೆ ಎಂಬ ಮಾತು ಪೊಲೀಸ್ ವಲಯದಿಂದ ಕೇಳಿ ಬಂದಿದೆ.

- Advertisement -

Latest News

error: Content is protected !!