Friday, June 5, 2026
Homeಕರಾವಳಿಮಂಗಳೂರುಮಂಗಳೂರು;ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ; ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗೆ ಗಾಯ, ಆಸ್ಪತ್ರೆಗೆ...

ಮಂಗಳೂರು;ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ; ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗೆ ಗಾಯ, ಆಸ್ಪತ್ರೆಗೆ ದಾಖಲು

- Advertisement -
- Advertisement -

ಮಂಗಳೂರು;ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ; ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿ ಕೇಶವ್ ಎಂಬಾತನಿಗೆ ಗಾಯಗಳಾಗಿದ್ದು, ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉಳ್ಳಾಲದ ರೌಡಿ ಮುಖರ್‌ ಮತ್ತು ಇತರ ಕೈದಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ  ಮುಖರ್ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿ ಕೇಶವ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮುಖರ್‌ ಮೇಲೆ ಈಗಾಗಲೇ 15 ಕ್ಕೂ ಹೆಚ್ಚು ಪ್ರಕರಣಗಳಿದ್ದು, 2022 ರಲ್ಲಿ ಆತನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಸಂಬಂಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!