Sunday, June 7, 2026
Homeತಾಜಾ ಸುದ್ದಿಎರಡನೇ ತರಗತಿ ವಿದ್ಯಾರ್ಥಿಗಳ ನಡುವೆ ಗಲಾಟೆ, ಬಾಲಕ ಸಾವು

ಎರಡನೇ ತರಗತಿ ವಿದ್ಯಾರ್ಥಿಗಳ ನಡುವೆ ಗಲಾಟೆ, ಬಾಲಕ ಸಾವು

- Advertisement -
- Advertisement -

ಫಿರೋಜಾಬಾದ್: ಎರಡನೇ ತರಗತಿ ವಿದ್ಯಾರ್ಥಿಗಳ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿಕೋಹಾಬಾದ್ ಎಂಬಲ್ಲಿ ನಡೆದಿದೆ.

ಇಲ್ಲಿನ ಕಿಶನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡನೇ ತರಗತಿಯ ಶಿವಂ ಮತ್ತು ಇತರ ಕೆಲವು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ.ಈ ವೇಳೆ ಬಾಲಕ ಶಿವಂ ಎಂಬಾತನ ಎದೆಯ ಮೇಲೆ ಓರ್ವ ಜಂಪ್ ಮಾಡಿದ್ದಾನೆ‌.ತಕ್ಷಣ ಗಂಭೀರವಾಗಿ ಗಾಯಗೊಂಡಿದ್ದ ಶಿವಂ (7)ನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತ ಮಂಗಳವಾರ ನಿಧನನಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಶಾಲೆಯ ಆಡಳಿತದ ಉಸ್ತುವಾರಿಯನ್ನು ಸಹ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!