Friday, June 5, 2026
Homeಕರಾವಳಿಉಪ್ಪಿನಂಗಡಿಯಲ್ಲಿ  ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ; 8 ಮಂದಿಯ ವಿರುದ್ಧ ಎಫ್ ಐ ಆರ್ ದಾಖಲು

ಉಪ್ಪಿನಂಗಡಿಯಲ್ಲಿ  ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ; 8 ಮಂದಿಯ ವಿರುದ್ಧ ಎಫ್ ಐ ಆರ್ ದಾಖಲು

- Advertisement -
- Advertisement -

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟವಾಗಿ 8 ಮಂದಿಯ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ಕ್ಷುಲ್ಲಕ ಕಾರಣಕ್ಕೆ ಎರಡು ವಿದ್ಯಾರ್ಥಿಗಲ ಗುಂಪುಗಳ ನಡುವೆ ಹೊಡೆದಾಟವಾಗಿದೆ.  ಕರ್ತವ್ಯದಲ್ಲಿದ್ದ ಪೊಲೀಸರು ಅವರನ್ನು ಸಮಾಧಾನಿಸಿದರೂ ಅವರು ಜಗಳ ಮುಂದುವರೆಸಿದ್ದಾರೆ.

ಹೀಗಾಗಿ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್ (21), ಅಭಿಷಿತ್ (20), ಧನುಷ್ (19), ಮೋಹನ್ (19) ನಂದನ್ (19), ವಿನ್ಯಾಸ್ (18), ರೂಪೇಶ್(20) ಹಿತೇಶ್(19) ಎಂಬವರನ್ನು ವಶಕ್ಕೆ ಪಡೆದು ಅವರ ವಿರುದ್ಧ ಸಾರ್ವಜನಿಕ ಶಾಂತಿಭಂಗದ ಆರೋಪದನ್ವಯ ಪೊಲೀಸ್ ಸಿಬ್ಬಂದಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!