ಮಂಗಳೂರು : ನಗರದ ಮೂಡುಬಿದಿರೆ ಯನೆಪೊಯೆ ಎಂಜಿನಿಯರಿಂಗ್ ಕಾಲೇಜಿನ ಎರಡು ತಂಡದ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಘಟನೆ ವೇಳೆ ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೆಕ್ಯಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದ ವಿದ್ಯಾರ್ಥಿಗಳ ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದ್ದು ಸಹಾಝ್ ಮತ್ತು ಮಹಮ್ಮದ್ ಸ್ವರೂಬ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಂದಿನ ಶನಿವಾರ ‘ಸಂಪ್ರದಾಯ’ ದಿನ ಕಾರ್ಯಕ್ರಮ ನಡೆಯಲಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಪೂರ್ವ ತಯಾರಿ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಹೊಡೆದಾಟದ ಸಂಬಂಧ ಪ್ರಾಂಶುಪಾಲರು ಉಭಯ ತಂಡಗಳ ತಲಾ 4ರಂತೆ 8 ಮಂದಿಯನ್ನು ನಿನ್ನೆ ಅಮಾನತುಗೊಳಿಸಿ ಮನೆಗೆ ಕಳುಹಿಸಿದ್ದರು. ಮತ್ತೆ ಈ ಗುಂಪು ಕಾಲೇಜಿನ ಹೊರಗಡೆ ಹೊಡೆದಾಟ ನಡೆಸಿದ್ದು, ತೃತೀಯ ವರ್ಷದ ನಾಲ್ಕು ಮಂದಿಯ ಮೇಲೆ ಅಂತಿಮ ವರ್ಷದ ವಿದ್ಯಾರ್ಥಿಗಳ 40 ಮಂದಿಯ ತಂಡ ಹಲ್ಲೆ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ; ಇಬ್ಬರಿಗೆ ಗಾಯ
- Advertisement -
- Advertisement -
- Advertisement -
