Sunday, May 5, 2024
Homeಕರಾವಳಿಉಪ್ಪಿನಂಗಡಿ; ವಿದ್ಯಾರ್ಥಿನಿಗೆ ಮೆಸೇಜ್ ಕಳಿಸಿದ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಮಾತಿನ ಚಕಮಕಿ: ಗುಂಪು ಘರ್ಷಣೆಯನ್ನು...

ಉಪ್ಪಿನಂಗಡಿ; ವಿದ್ಯಾರ್ಥಿನಿಗೆ ಮೆಸೇಜ್ ಕಳಿಸಿದ ವಿಚಾರಕ್ಕೆ ಎರಡು ಗುಂಪಿನ ಮಧ್ಯೆ ಮಾತಿನ ಚಕಮಕಿ: ಗುಂಪು ಘರ್ಷಣೆಯನ್ನು ತಡೆದ ಪೊಲೀಸರು

spot_img
- Advertisement -
- Advertisement -

ಉಪ್ಪಿನಂಗಡಿ: ವಿದ್ಯಾರ್ಥಿಯೊಬ್ಬ ಅನ್ಯಕೋಮಿನ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದು ಗುಂಪು ಘರ್ಷಣೆ ಹಂತದಲ್ಲಿದ್ದಾಗ ಪೊಲೀಸರು ತಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಿನ್ನೆ ಸಂಜೆ ನಡೆದಿದೆ.

 ಸೆ.22ರಂದು ಸಂಜೆ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೋರ್ವ ಕ್ಷುಲ್ಲಕ ಕಾರಣಕ್ಕಾಗಿ ತನ್ನದೇ ಕಾಲೇಜಿನ ವಿದ್ಯಾರ್ಥಿಯೋರ್ವನಿಗೆ ಹಲ್ಲೆ ನಡೆಸಿದ್ದ. ವಿಚಾರಕ್ಕೆ ಸಂಬಂಧಿಸಿ ಸೆ.23ರಂದು ಬೆಳಗ್ಗೆ ಉಭಯ ತಂಡಗಳ ಬೆಂಬಲಿಗ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಗುಂಪು ಕಟ್ಟಿಕೊಂಡು ಹೊಡೆದಾಟಕ್ಕೆ ಸಿದ್ಧತೆ ನಡೆಸಿದ್ದರು. ಇದರ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಎಲ್ಲರನ್ನೂ ಚದುರಿಸಿ ಎಚ್ಚರಿಕೆ ನೀಡಿದ್ದರಲ್ಲದೆ, ಬಳಿಕ ಹತ್ತಕ್ಕೂ ಮಿಗಿಲಾದ ವಿದ್ಯಾರ್ಥಿಗಳಿಗೆ ಅವರವರ ಹೆತ್ತವರೊಂದಿಗೆ ಪ್ರಾಂಶುಪಾಲರನ್ನು ಭೇಟಿ ಮಾಡಲು ಸೂಚಿಸಿ, ಮುಚ್ಚಳಿಕೆ ಪತ್ರ ಬರೆದ ಬಳಿಕವೇ ತರಗತಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು.

ಇದರ ಬೆನ್ನಲ್ಲೇ ಅದೇ ವಿಷಯಕ್ಕೆ ಸಂಬಂಧಿಸಿ ನಿನ್ನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬೃಹತ್ ಸಂಖ್ಯೆಯಲ್ಲಿ ಗುಂಪುಗೂಡಿದ ವಿದ್ಯಾರ್ಥಿಗಳು ಪರಸ್ಪರ ಮಾತಿನ ಚಕಮಕಿ ನಡೆಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಬಂದಿದ್ದು, ಎಲ್ಲರನ್ನೂ ಸ್ಥಳದಿಂದ ಚದುರಿಸಿದ್ದಾರೆ. ಒಂದು ಗುಂಪಿನಲ್ಲಿ ವಿದ್ಯಾರ್ಥಿಗಳಲ್ಲದವರೂ ಇದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಯೋರ್ವ ಭಿನ್ನ ಕೋಮಿನ ವಿದ್ಯಾರ್ಥಿನಿಗೆ ಮೊಬೈಲ್ ಸಂದೇಶ ಕಳುಹಿಸುತ್ತಿದ್ದಾನೆಂಬ ವಿಚಾರದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗುತ್ತಿದೆ.

- Advertisement -
spot_img

Latest News

error: Content is protected !!