Thursday, June 4, 2026
Homeಕರಾವಳಿಬಂಟ್ವಾಳ; ಫರಂಗಿಪೇಟೆಯಲ್ಲಿ ಎರಡು ತಂಡಗಳ ಮಧ್ಯೆ ಮಾರಾಮಾರಿ

ಬಂಟ್ವಾಳ; ಫರಂಗಿಪೇಟೆಯಲ್ಲಿ ಎರಡು ತಂಡಗಳ ಮಧ್ಯೆ ಮಾರಾಮಾರಿ

- Advertisement -
- Advertisement -

ಬಂಟ್ವಾಳ; ಎರಡು ತಂಡಗಳ ಮಧ್ಯೆ ಮಾರಮಾರಿ ನಡೆದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಫರಂಗಿಪೇಟೆ ಬಳಿಯ ಅಮ್ಮೆಮಾರ್ ಎಂಬಲ್ಲಿ ಲಾಂಗು ಮಚ್ಚುಗಳಿಂದ ಎರಡು ತಂಡಗಳು ಬಡಿದಾಡಿಕೊಂಡಿದ್ದು ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ.ಘಟನೆಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಳೇ ದ್ವೇಷದ ಹಿನ್ನೆಲೆ ತಲವಾರಿನಿಂದ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು.ತಸ್ಲೀಮ್ ಹಾಗೂ ಸ್ನೇಹಿತರು ಮಾತನಾಡುತ್ತಿದ್ದ ಪೋನ್ ಕಾಲ್​ ಬಂದ ಹಿನ್ನೆಲೆ ತಸ್ಲೀಮ್ ಹಾಗೂ ತಂಡ ಅಮ್ಮೆಮಾರ್ ಶಾಲಾ ಬಳಿಗೆ ಹೋಗಿ ಅಲ್ಲಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಸ್ಥಳೀಯ ನಿವಾಸಿಗಳಾದ ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ತಲವಾರು ದಾಳಿಯಾಗಿದ್ದು. ಹಲ್ಲೆ ಸಂಬಂಧ ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!