Thursday, June 4, 2026
Homeಅಪರಾಧಕಾಸರಗೋಡು: ಸಹೋದರರ ನಡುವೆ ಜಗಳ- ಕೊಲೆಯಲ್ಲಿ ಅಂತ್ಯ

ಕಾಸರಗೋಡು: ಸಹೋದರರ ನಡುವೆ ಜಗಳ- ಕೊಲೆಯಲ್ಲಿ ಅಂತ್ಯ

- Advertisement -
- Advertisement -

ಕಾಸರಗೋಡು: ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಗೊಂಡ ಘಟನೆ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆ ಎಂಬಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಎಂದು ಗುರುತಿಸಲಾಗಿದೆ. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ.

ಮಾ. 21 ರಂದು ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರ ನಡುವಿನ ಜಗಳವನ್ನು ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ರಿಗೂ ಗಾಯಗಳಾಗಿವೆ. ಜಗಳ ವಿಕೋಪಕ್ಕೆ ತಿರುಗಿ ರಾಜೇಶ್, ಥೋಮಸ್ ನನ್ನು ಇರಿದಿದ್ದು, ಬೊಬ್ಬೆ ಕೇಳಿ ಸ್ಥಳೀಯರು ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಥೋಮಸ್ ರನ್ನು ಕೂಡಲೇ ಕಾಸರಗೋಡು ಆಸ್ಪತ್ರೆಗೆ ಕರೆದುಕೊಂಡು ಹೋದರು ಜೀವ ಉಳಿಸಲಾಗಲಿಲ್ಲ.

ರಾಜೇಶ್ ಬದಿಯಡ್ಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ವಿಲ್ಫ್ರೆಡ್’ನನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!