Saturday, June 6, 2026
Homeಕರಾವಳಿಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ- ನಾಲ್ಕು ಮಂದಿ ಡ್ರಗ್ಸ್ ಸೇವನೆ ಮಾಡಿರುವುದು ದೃಢ..!

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ- ನಾಲ್ಕು ಮಂದಿ ಡ್ರಗ್ಸ್ ಸೇವನೆ ಮಾಡಿರುವುದು ದೃಢ..!

- Advertisement -
- Advertisement -

ಮಂಗಳೂರು: ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಠಾಣೆ ಪೊಲೀಸರು 8 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಮೊಹಮ್ಮದ್‌, ವಿಮಲ್‌, ಫಹಾದ್‌‌ ಮುನಾಫ್‌‌‌, ಶಾಹೀದ್‌‌‌, ಕಾನೆ ಜಾನ್ಸನ್‌‌, ಆದರ್ಶ್‌‌, ಮೊಹಮ್ಮದ್‌ ನಾಸೀಫ್‌‌, ತಾಹೀರ್‌ ಸೇರಿದಂತೆ ಎಂಟು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. 8 ಮಂದಿಯ ಪೈಕಿ ನಾಲ್ವರು ಡ್ರಗ್ಸ್‌‌ ಸೇವಿಸಿರುವುದು ದೃಢಪಟ್ಟಿದೆ.

ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಪದವಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಡಿ.2ರಂದು ಘರ್ಷಣೆ ನಡೆದಿದೆ. ಅದೇ ಕಾಲೇಜಿನ ಇತರ ಎಂಟು ವಿದ್ಯಾರ್ಥಿಗಳು ಇಂಟರ್ಲಾಕ್ ಮತ್ತು ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಆದರ್ಶ್ ಹಾಗೂ ಮೊಹಮ್ಮದ್ ನಾಸಿಫ್ ಗಾಯಗೊಂಡಿದ್ದಾರೆ.

ಪ್ರಕರಣದ ಸಂಬಂಧ ಯೇನಪೋಯ ಹಾಸ್ಟೆಲ್‌‌ಗೆ ಮಂಗಳೂರು ಎಸ್‌ಪಿ ಶಶಿಕುಮಾರ್‌ ಭೇಟಿ ನೀಡಿದ್ದು, ಈ ಸಂದರ್ಭ ಘಟನೆಯ ಬಗ್ಗೆ ಅವರಿಗೆ ತಿಳಿಸಿದ್ದು, ಕೂಡಲೇ ಹಾಸ್ಟೆಲ್‌ ಅನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಶಕ್ಕೆ ಪಡೆದುಕೊಂಡ 8 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಈ ಪೈಕಿ 4 ಮಂದಿ ಗಾಂಜಾ ಸೇವನೆ ಮಾಡಿದ್ದಾರೆ ಎನ್ನುವುದು ದೃಢಪಟ್ಟಿದೆ.

- Advertisement -

Latest News

error: Content is protected !!