Friday, June 5, 2026
Homeಕರಾವಳಿಮಂಗಳೂರು ಜೈಲಿನಲ್ಲಿ ಮಾರಾಮಾರಿ:ಇಬ್ಬರು ಕೈದಿಗಳಿಗೆ ಗಾಯ

ಮಂಗಳೂರು ಜೈಲಿನಲ್ಲಿ ಮಾರಾಮಾರಿ:ಇಬ್ಬರು ಕೈದಿಗಳಿಗೆ ಗಾಯ

- Advertisement -
- Advertisement -

ಮಂಗಳೂರು : ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಇಂದು ಬೆಳಿಗ್ಗೆ ಎರಡು ಕೈದಿಗಳ ತಂಡದ ನಡುವೆ ಮಾರಾಮಾರಿ ನಡೆದಿದ್ದು, ಕೈದಿಗಳ ನಡುವಿನ ಹೊಡೆದಾಟದಲ್ಲಿ ಇಬ್ಬರು ಕೈದಿಗಳು ಗಾಯಗೊಂಡಿದ್ದಾರೆ.

ಮಂಗಳೂರಿನ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿ, ಜೈಲು ಸೇರಿದ್ದಂತ ಸಮೀರ್ ಹಾಗೂ ಅನ್ಸಾರ್, ಜೈನುದ್ದೀನ್ ನಡುವೆ ಜಗಳ ಉಂಟಾಗಿದೆ. ಜಗಳ ತಾರಕಕ್ಕೆ ಹೋಗಿ, ಮಾರಾಮಾರಿ ಕೂಡ ನಡೆದಿದೆ. ಇದರಿಂದಾಗಿ ಅನ್ಸಾರ್, ಜೈನುದ್ದೀನ್ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಅಂದಹಾಗೇ ಬೆಳಿಗ್ಗೆ ತಿಂಡಿ ಸಮಯದಲ್ಲಿ ಈ ಜಗಳ ನಡೆದಿದೆ ಎನ್ನಲಾಗಿದೆ. ಕೈಗೆ ಸಿಕ್ಕಂತ ವಸ್ತುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದರಿಂದಾಗಿ ಅನ್ಸಾರ್, ಜೈನುದ್ದೀನ್ ಅವರ ಭುಜ, ಬೆನ್ನಿಗೆ ಗಾಯವಾಗಿದೆ. ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮಂಗಳೂರು ಕಮೀಷನರ್ ಶಶಿಕುಮಾರ್ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!