- Advertisement -
![]()
- Advertisement -
ಕುಂದಾಪುರ: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ದೇವಸ್ಥಾನದಲ್ಲಿ ಮತಯಾಚಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಸಬ್ಲಾಡಿಯ ಶ್ರೀಮಾರಿಕಾಂಬಾ ಮತ್ತು ನಂದಿಕೇಶ್ವರ ಹಾಗೂ ಸಪರಿವಾರ ದೇವಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈ ಸಂಬಂಧ ಗುರುರಾಜ್ ಗಂಟಿಹೊಳೆ ವಿರುದ್ಧ ಬೈಂದೂರು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಣಿಕಂಠ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
- Advertisement -


