Monday, June 8, 2026
Homeತಾಜಾ ಸುದ್ದಿಬಜ್ಪೆ: ಸಾವರ್ಕರ್‌ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪಿಸಿದವರ ವಿರುದ್ಧ ದೂರು ದಾಖಲು

ಬಜ್ಪೆ: ಸಾವರ್ಕರ್‌ ಭಾವಚಿತ್ರ ಪ್ರದರ್ಶನಕ್ಕೆ ಆಕ್ಷೇಪಿಸಿದವರ ವಿರುದ್ಧ ದೂರು ದಾಖಲು

- Advertisement -
- Advertisement -

ಬಜಪೆ: ಗುರುಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಿನ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಕೈಕಂಬದ ಬೆಥನಿ ಶಾಲಾ ವಿದ್ಯಾರ್ಥಿಗಳು ಪ್ರದರ್ಶನ ಮಾಡಿರುವ ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾದ್ದಾಂತ ಮಾಡಿದ ಹಲವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವುದಾಗಿ ಕೆಲ ಆರೋಪಿಗಳ ವಿರುದ್ಧ ಗುರುಪುರ ಗ್ರಾಪಂ ಪಿಡಿಒ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ರು. ದೂರಿನ ಹಿನ್ನೆಲೆಯಲ್ಲಿ ರಿಯಾಝ್, ಮನ್ಸೂರ್, ಅಶ್ರಫ್, ಶಾಹಿಕ್ ಹಾಗೂ ಇನ್ನಿತರರ ಮೇಲೆ ಪ್ರಕರಣ ದಾಖಲಾಗಿದೆ. ಬಜ್ಪೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!