Tuesday, June 18, 2024
Homeತಾಜಾ ಸುದ್ದಿಕೊಲೆಯಾದ ದರ್ಶನ್ ಅಭಿಮಾನಿ ರೇಣುಕಾ ಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ...

ಕೊಲೆಯಾದ ದರ್ಶನ್ ಅಭಿಮಾನಿ ರೇಣುಕಾ ಸ್ವಾಮಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ ಫಿಲಂ ಚೇಂಬರ್ ಪದಾಧಿಕಾರಿಗಳು

spot_img
- Advertisement -
- Advertisement -

ಚಿತ್ರದುರ್ಗ : ನಟ ದರ್ಶನ್ ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಇಂದು ಫಿಲಂ ಚೇಂಬರ್ ಪದಾಧಿಕಾರಿಗಳು ಭೇಟಿ ನೀಡಿದ್ದಾರೆ. ಚಿತ್ರದುರ್ಗದ ವಿ ಆರ್ ಎಸ್ ಬಡಾವಣೆಯಲ್ಲಿರುವ ರೇಣುಕಾ ಸ್ವಾಮಿ ನಿವಾಸಕ್ಕೆ ಇದೀಗ ಫಿಲಂ ಚೇಂಬರ್ ಪದಾಧಿಕಾರಿಗಳು ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.

ಫಿಲಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್, ಸಾರಾ ಗೋವಿಂದು, ಚಿನ್ನೇಗೌಡ, ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಚಂದ್ರಶೇಖರ, ಕುಮಾರ್, ಕರಿಸುಬ್ಬು ಸೇರಿ ಚಿತ್ರರಂಗದ ಹಲವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಇದೇ ವೇಳೆ ಶಾಸಕರಾದ ವೀರೇಂದ್ರ ಪಪ್ಪಿ ಅವರು ಕೂಡ ರೇಣುಕಾ ಸ್ವಾಮಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ 2 ಲಕ್ಷ ರೂಪಾಯಿಯ ಪರಿಹಾರದ ಚೆಕ್ ಅನ್ನು ನೀಡಿದರು. ಇದೆ ವೇಳೆ ರೇಣುಕಾ ಸ್ವಾಮಿ ತಂದೆ ಶಿವನಗೌಡ ಅವರು, ನನ್ನ ಮಗನಿಗೆ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ ಎಂದು ಕಣ್ಣೀರು ಹಾಕಿದರು.ಯಾವ ಟೆರರಿಸ್ಟಿಗು ಹೀಗೆ ಸಾಯಿಸಲ್ಲ ಹಾಗೆ ನನ್ನ ಮಗನನ್ನು ಕೊಂದಿದ್ದಾರೆ. ಮಗನ ಕೊಲೆಯ ಭೀಕರತೆಯನ್ನು ನೆನೆದು ರೇಣುಕಾ ಸ್ವಾಮಿ ತಂದೆ ಶಿವನಗೌಡ ಕಣ್ಣೀರಿಟ್ಟಿದ್ದಾರೆ. ಇದೆ ವೇಳೆ ತಾಯಿ ರತ್ನಪ್ರಭಾ ಕೂಡ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.

- Advertisement -
spot_img

Latest News

error: Content is protected !!