Sunday, June 7, 2026
Homeತಾಜಾ ಸುದ್ದಿಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ಅಪ್ಪುವಿನ ಅಂತ್ಯಸಂಸ್ಕಾರ!

ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ಅಪ್ಪುವಿನ ಅಂತ್ಯಸಂಸ್ಕಾರ!

- Advertisement -
- Advertisement -

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ಇಂದು ಸಂಜೆಯೇ ನೆರವೇರಿಸಲಾಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಪುನೀತ್ ರಾಜಕುಮಾರ್ ಅವರ ಪುತ್ರಿ ದೃತಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಹಾಗೂ ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದ್ದು, ಅಮೆರಿಕಾದಿಂದ ಮಗಳು ಆಗಮಿಸುತ್ತಿದ್ದಂತೆ ನಟ ಪುನೀತ್​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಏರ್ ಇಂಡಿಯಾ ವಿಶೇಷ ವಿಮಾನದ ಮೂಲಕ ಮಗಳನ್ನು ಕರೆತರಲಾಗುತ್ತಿದ್ದು, ದೆಹಲಿಗೆ ಮಗಳು ಆಗಮಿಸುತ್ತಿದ್ದಂತೆ ಇಲ್ಲಿ ಮೆರವಣಿಗೆ ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ.

ಇಂದು ಸಂಜೆ 3 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 3 ಗಂಟೆಯ ನಂತರ ಪುನೀತ್​ ಅವರ ಪಾರ್ಥೀವ ಶರೀರವನ್ನು ಕಂಠೀರವ ಸ್ಟುಡಿಯೋ​ಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಅಲ್ಲಿ ಅಪ್ಪು ಅವರ ಅಂತ್ಯಸಂಸ್ಕಾರ ನಡೆಯಲಿದೆ.

ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾ. ರಾಜ್​ಕುಮಾರ್​ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಸರ್ಕಾರದ ಸಕಲ ಗೌರವಗಳೊಂದಿಗೆ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಇನ್ನು ಇಂದು ಸಂಜೆ 5 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸದ್ಯಕ್ಕೆ ನಿರ್ಧರಿಸಿದ್ದಾರೆ.

ಅಂತ್ಯಸಂಸ್ಕಾರದ ಸ್ಥಳದಲ್ಲಿರಲು ಪುನೀತ್​ ರಾಜ್​ಕುಮಾರ್​ ಅವರ ಕುಟುಂಬದವರು ಹಾಗೂ ಆಪ್ತರಿಗೆ ಮಾತ್ರ ಅನುಮತಿ ನೀಡಲಾಗಿದೆ. ಇನ್ನು ಪುನೀತ್​ ಅವರ ಅಂತ್ಯಸಂಸ್ಕಾರ ನಡೆಯುವ ಸ್ಥಳದಲ್ಲಿ ತುಂಬಾ ಜನರು ಇರಲು ಸ್ಥಳಾವಕಾಶ ಇಲ್ಲದ ಕಾರಣಕ್ಕೆ ಅಭಿಮಾನಿಗಳಿಗಾಗಿ ಹೊರಗಡೆ ಪರದೆಯ ವ್ಯವಸ್ಥೆ ಮಾಡಲಾಗುವುದು. ಇದರಲ್ಲಿ ಅಂತ್ಯಸಂಸ್ಕಾರ ನಡೆಯುವುದನ್ನು ವೀಕ್ಷಿಸಬಹುದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮಧ್ಯಾಹ್ನ 3 ಗಂಟೆಗೆ ಕಂಠೀರವ ಸ್ಡೇಡಿಯಂನಿಂದ ನಟ ಪುನೀತ್ ರಾಜ್‍ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಆರಂಭವಾಗುತ್ತದೆ. ಬೆಂಗಳೂರು ಪೊಲೀಸರಿಂದ ಅಂತಿಮ ಯಾತ್ರೆಯ ರೂಟ್ ಮ್ಯಾಪ್‌ ಈಗಾಗಲೇ ಸಿದ್ಧವಾಗಿದೆ. ಕಂಠೀರವ ಸ್ಟೇಡಿಯಂನಿಂದ ಕಾರ್ಪೋರೇಶನ್ ವೃತ್ತ, ಮೈಸೂರ್ ಬ್ಯಾಂಕ್ ಸರ್ಕಲ್, ಬಲ ತಿರುವು ಪಡೆದು ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್, ಕಾವೇರಿ ಜಂಕ್ಷನ್, ಸ್ಯಾಂಕಿ ಕೆರೆ, ಸರ್ಕಲ್ ಮಾರಮ್ಮ ಸರ್ಕಲ್, ಯಶವಂತಪುರ, ಗೋವರ್ಧನ್ ಟಾಕೀಸ್, ಆರ್ ಎಂ ಸಿ ಯಾರ್ಡ್, ಗೊರಗುಂಟೆಪಾಳ್ಯ ಸಿಗ್ನಲ್ ಎಡ ತಿರುವು ಪಡೆದು ಕಂಠೀರವ ಸ್ಟುಡಿಯೋಗೆ ತಲುಪಲಿದೆಯಂತೆ ಅಂತಿಮ ಯಾತ್ರೆ.

- Advertisement -

Latest News

error: Content is protected !!