Tuesday, June 23, 2026
Homeಚಿಕ್ಕಮಗಳೂರುಅಂತಿಮ ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಅಂತಿಮ ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

- Advertisement -
- Advertisement -

ಚಿಕ್ಕಮಗಳೂರು ; ಅಂತಿಮ ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.  ಶೃಂಗೇರಿಯ ಜೆಸಿಬಿಎಂ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿ 22 ವರ್ಷದ ದಿಶಾ ಮೃತ ದುರ್ದೈವಿ.

ದಿಶಾ ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಶೃಂಗೇರಿ ಪಟ್ಟಣದ ವಾಸವಾಗಿದ್ದರು. ಇಂದು ಹಾಸ್ಟೆಲ್‌ನಲ್ಲಿದ್ದ ವೇಳೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸಹಪಾಠಿಗಳು ನೆರವಿಗೆ ಧಾವಿಸಿದರೂ, ಅದಾಗಲೇ ದಿಶಾ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ದಿಶಾ ಅಕಾಲಿಕ ನಿಧನ ಹೆತ್ತವರು, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರಿಗೆ ಆಘಾತವನ್ನುಂಟು ಮಾಡಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!