Sunday, June 7, 2026
Homeಕರಾವಳಿವಿಟ್ಲ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ!

ವಿಟ್ಲ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ!

- Advertisement -
- Advertisement -

ಕಾಸರಗೋಡು: ಇಲ್ಲಿನ ಪೆರ್ಲದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕರವರ ಪುತ್ರಿ ಶ್ರಾವ್ಯ ಮೃತಪಟ್ಟವರೆಂದು ಗುರುತಿಸಲಾಗಿದೆ.

ವಿಟ್ಲದ ಪದವಿ ಕಾಲೇಜಿನಲ್ಲಿ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದ ಈಕೆ, ಅ. 29ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಧ್ಯಾಹ್ನದ ವೇಳೆ ತಂದೆ-ತಾಯಿ ತೋಟದ ಕೆಲಸ ಮುಗಿಸಿ ವಾಪಸ್ಸು ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!