- Advertisement -
- Advertisement -
ಉತ್ತರಕನ್ನಡ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಕೊನೆಗೂ ಪತ್ತೆಯಾಗಿದೆ.ಇಂದು ನಡೆದ ಶೋಧ ಕಾರ್ಯಾಚರಣೆಯಲ್ಲಿ ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಅದರಲ್ಲಿ ಕೇರಳ ಮೂಲದ ಲಾರಿ ಚಾಲಕನಾಗಿದ್ದ ಅರ್ಜುನ್ ಶವ ಸೇರಿದಂತೆ ಮತ್ತೋರ್ವರ ಶವ ಪತ್ತೆಯಾಗಿದೆ ಎನ್ನಲಾಗಿದೆ.
ಇನ್ನು ಅರ್ಜುನ್ ಓಡಿಸುತ್ತಿದ್ದ ಲಾರಿ ಕೂಡ ಪತ್ತೆಯಾಗಿದೆ. ಸದ್ಯ ಅರ್ಜುನ್ ಮೃತದೇಹ ಭಾರತ ಬೆಂಜ್ ಲಾರಿಯಲ್ಲಿದೆ. ಮತ್ತೊಂದು ಶವ ಯಾರದ್ದು ಎಂದು ಇನ್ನಷ್ಟೇ ದೃಢಪಡಿಸಬೇಕಿದೆ. ಶಿರೂರು ಬಳಿ, ಗಂಗಾವಳಿ ನದಿಯಲ್ಲಿ ಆರು ದಿನಗಳಿಂದ ಶೋಧ ಕಾರ್ಯ ನಡೆಸಲಾಗಿತ್ತು. ಸದ್ಯ ಗಂಗಾವಳಿ ನದಿಯಿಂದ ಲಾರಿ ಮತ್ತು ಶವಗಳನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದೆ.
- Advertisement -