ಬೆಂಗಳೂರು: HSRP ನಂಬರ್ ಪ್ಲೇಟ್ ಅಳವಡಿಸಲು ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ಸೆಪ್ಟಂಬರ್ 15 ನಂತರವೂ ವಾಹನ ಸವಾರರು HSRP ನಂಬರ್ ಪ್ಲೇಟ್ ಗಳನ್ನು ಅಳವಡಿಸದಿದ್ದರೆ ಸೆಪ್ಟಂಬರ್ 16 ರಿಂದ ದಂಡ ವಾಪತಿಸಬೇಕಾಗುತ್ತದೆ.
2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ HSRP ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ ನಲ್ಲಿ ಅಧಿಸೂಚನೆ ಹೊರಡಿಸಿತ್ತು.ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.
ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.
ಆನ್‌ಲೈನ್ ಮೂಲಕ HSRP ನಂಬರ್ ಪ್ಲೇಟ್ ಅಳವಡಿಕೆ ಹೇಗೆ?
. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ
* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ
2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು


