Thursday, June 4, 2026
Homeತಾಜಾ ಸುದ್ದಿಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು

ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಮೈಸೂರು: ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.  ‘ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ’ ಎಂದು ಹೇಳಿಕೆ ನೀಡಿರುವ ಆರೋಪದ ಮೇಲೆ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ಫೆಬ್ರವರಿ 16 ರಂದು ಅಶ್ವತ್ಥ್ ನಾರಾಯಣ ಅವರು, ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದತ್ಮಕ ಹೇಳಿಕೆಯನ್ನು ನೀಡಿದ್ದರು, ಆದಾದ ಬಳಿಕ ರಾಜ್ಯದ ನಾನಾ ಕಡೆಗಳಲ್ಲಿ ಅವರ ವಿರುದ್ದ ದೂರು ದಾಖಲಾಗಿತ್ತು, ಅದೇ ರೀತಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ಮೈಸೂರಿನ ದೇವರಾಜ ಠಾಣೆ ಈ ಹಿಂದೆ ದೂರು ನೀಡಿದ್ದು, ಆದರೆ ದೂರು ಪಡೆದುಕೊಂಡಿದ್ದ ಪೋಲಿಸರು ಎಫ್‌ಐಆರ್‌ ದಾಖಲು ಮಾಡಿರಲಿಲ್ಲ, ಈಗ ಮತ್ತೆ ದೂರು ನೀಡಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು, ಅವರ ದೂರಿನ ಅನ್ವಯ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ.

ಮಂಡ್ಯದಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ್ದ ಅಶ್ವತ್‌ ನಾರಾಯಣ್‌ ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದರು.

- Advertisement -

Latest News

error: Content is protected !!