Friday, October 4, 2024
Homeತಾಜಾ ಸುದ್ದಿಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲು

ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲು

spot_img
- Advertisement -
- Advertisement -

ಬೆಂಗಳೂರು : ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ವಜಾ ಮಾಡಿದ ಬೆನ್ನಲ್ಲೇ ಇದೀಗ  ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.  ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶಿಸಿದೆ.

ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗಾರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ.

- Advertisement -
spot_img

Latest News

error: Content is protected !!