Wednesday, June 24, 2026
Homeಕರಾವಳಿಮಂಗಳೂರುವಿವಾದಿತ ಹೇಳಿಕೆ ನೀಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಎಫ್ ಐಆರ್

ವಿವಾದಿತ ಹೇಳಿಕೆ ನೀಡಿದ್ದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಎಫ್ ಐಆರ್

- Advertisement -
- Advertisement -

ಸುಳ್ಯ: ಬಿಲ್ಲವ ಸಮುದಾಯದ ಹೆಣ್ಣುಮಕ್ಕಳ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದಡಿ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಳಲಂಬೆ ನೀಡಿದ ದೂರಿನ ಅನ್ವಯ ಬೆಳ್ಳಾರೆ ಪೊಲೀಸರು ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಸಂಜೀವ ಪೂಜಾರಿ ವಿರುದ್ಧ ದೂರು ನೀಡಿದರೂ ಪ್ರಕರಣ ದಾಖಲಿಸದ ಹಿನ್ನೆಲೆಯಲ್ಲಿ ಹಿಂದೂ ಜಾಗರಣಾ ವೇದಿಕೆ ನಾಳೆ ಪ್ರತಿಭಟನೆಗೆ ಕರೆ ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರಿಂದ ಎಫ್ ಐಆರ್ ದಾಖಲಾಗಿದೆ.

ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಸಂಜೀವ ಪೂಜಾರಿ
ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ವೇಶ್ಯೆಯರು ಎಂಬರ್ಥದ ಆಕ್ಷೇಪಾರ್ಹ ಮಾತುಗಳನ್ನಾಡಿದ್ದರು. ಈ ಮಾತುಕತೆಯ ಆಡಿಯೋ ವೈರಲ್ ಆಗಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಈ ಹಿಂದೆಯೂ ಕೂಡಾ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರಲ್ಲದೇ, ಸರ್ಕಾರಿ ಸೇವೆಯಿಂದಲೂ ಅಮಾನತುಗೊಂಡಿದ್ದರು.

- Advertisement -

Latest News

error: Content is protected !!