ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಅವರಿಗೆ 50 ಕೋಟಿ ರೂ. ಬೇಡಿಕೆ ಇಟ್ಟು ಹೆಚ್ಡಿಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ಟಾಟಾ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತ್ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಕೂಡ ತಮ್ಮಿಂದ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ.