Sunday, July 20, 2025
Homeತಾಜಾ ಸುದ್ದಿಗಿಚ್ಚಿ ಗಿಲಿಗಿಲಿ ವಿನ್ನರ್ ಹುಲಿ ಕಾರ್ತಿಕ್ ವಿರುದ್ಧ ಎಫ್ ಐಆರ್ ದಾಖಲು

ಗಿಚ್ಚಿ ಗಿಲಿಗಿಲಿ ವಿನ್ನರ್ ಹುಲಿ ಕಾರ್ತಿಕ್ ವಿರುದ್ಧ ಎಫ್ ಐಆರ್ ದಾಖಲು

spot_img
- Advertisement -
- Advertisement -

ಬೆಂಗಳೂರು : ಗಿಚ್ಚಿ ಗಿಲಿಗಿಲಿ ವಿನ್ನರ್ ಹುಲಿ ಕಾರ್ತಿಕ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಹುಲಿ ಕಾರ್ತಿಕ್ ಅವರು ಯಾವುದೋ ರೋಡ್ ಲ್ಲಿ ಬಿದ್ದಿರುವ ವಡ್ಡನ ತರ ಇದ್ಯಾ ಎಂದು ಡೈಲಾಗ್ ಹೊಡೆದಿದ್ದರು. ಇದೀಗ ಅವರ ಬಳಸಿದ  ಪದ ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ.

ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ. ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್ ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -
spot_img

Latest News

error: Content is protected !!