Thursday, June 4, 2026
Homeಕರಾವಳಿಮಂಗಳೂರುಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವತಿ ಗರ್ಭಿಣಿಯಾದ ಬಳಿಕ ಮದುವೆಯಾಗದೆ ಯುವಕನಿಂದ ವಂಚನೆ

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವತಿ ಗರ್ಭಿಣಿಯಾದ ಬಳಿಕ ಮದುವೆಯಾಗದೆ ಯುವಕನಿಂದ ವಂಚನೆ

- Advertisement -
- Advertisement -

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಜೂ.24 ರಂದು ಪ್ರಕರಣ ದಾಖಲಾಗಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ಪಿ.ಜಿ.ಕೃಷ್ಣ.ರಾವ್ (21) ವಿರುದ್ಧ ಪ್ರಕರಣ ದಾಖಲಾಗಿದೆ.

ಸ್ನೇಹಿತರಾಗಿದ್ದ ಇಬ್ಬರಿಗೂ ಹೈ ಸ್ಕೂಲ್ ನಿಂದಲೇ ಪರಿಚಯವಿದ್ದು ಬಳಿಕ ಪರಸ್ಪರ ಪ್ರೀತಿಸುತ್ತಿದ್ದು 2024 ರ ಅಕ್ಟೋಬರ್ ತಿಂಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ಬರ ಹೇಳಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಬಳಿಕ 2025 ಜನವರಿಯಲ್ಲಿ ಮನೆಗೆ ಬರಲು ಹೇಳಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿರುತ್ತಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಬಳಿಕ ಮುಂದಿನ ದಿನಗಳಲ್ಲಿ ಅನುಮಾನ ಗೊಂಡು ಆತನಲ್ಲಿ ತಿಳಿಸಿದಾಗ ಮಂಗಳೂರಿನ ಕ್ಲಿನಿಕ್ ನಲ್ಲಿ ಪರೀಕ್ಷೆಗೊಳಪಡಿಸಿದಾಗ 7.1/2 ತಿಂಗಳ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿದ್ದು ಆಗಲೂ ಆತ ಮದುವೆಯಾಗುವುದಾಗಿ ನಂಬಿಸಿದ್ದ ಎಂದು ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!